ಎಚ್ ಎಮ್ ಎಮ್ ನಲ್ಲಿ ಶಿಕ್ಷಕ-ರಕ್ಷಕ ಸಭೆ
ಕುಂದಾಪುರ : ಇಲ್ಲಿನ ಎಚ್ ಎಮ್ ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2021-22 ನೇ ಸಾಲಿನ ಶಿಕ್ಷಕ-ರಕ್ಷಕ ಸಭೆ ದಿನಾಂಕ 26.11.2021 ರಂದು ಜರಗಿತು. ಶಿಕ್ಷಕರ ಸ್ವರಚಿತ ಗೀತ ಗಾಯನದ ಮೂಲಕ ಆರಂಭಗೊಂಡ ಕಾರ್ಯಕ್ರಮದಲ್ಲಿ ಪ್ರಾಥಮಿಕ ವಿಭಾಗದ ಸಂಯೋಜಕ ಶಿಕ್ಷಕರಾದ ಕವಿತಾ ಪಿ ಮತ್ತು ವೀರೇಂದ್ರ ನಾಯಕ್ ಪೋಷಕರನ್ನು ಸ್ವಾಗತಿಸಿದರು. ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಜಗದೀಶ್ ಆಚಾರ್ ಸಾಸ್ತಾನ ಮತ್ತು ಸಹಾಯಕ ಮುಖ್ಯಶಿಕ್ಷಕಿ ಕವಿತಾ ಭಟ್ ವರದಿಯಲ್ಲಿ ಕೊರೋನಾ ನಂತರದ ಮಕ್ಕಳ ಶೈಕ್ಷಣಿಕ ಸ್ಥಿತಿಗತಿ, ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿಯೂ ಕೂಡ ಮಕ್ಕಳಿಗಾಗಿ ಸಂಸ್ಥೆ ಕೈಗೊಂಡ ಶೈಕ್ಷಣಿಕ ಚಟುವಟಿಕೆಗಳು ಮತ್ತು ಮುಂದಿನ ಶೈಕ್ಷಣಿಕ ಕಾರ್ಯಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ಸಂಸ್ಥೆಯ ಪ್ರಾಂಶುಪಾಲೆ ಚಿಂತನಾ ರಾಜೇಶ್ ಮಾತನಾಡಿ, ಮಕ್ಕಳ ಪ್ರಗತಿಯಲ್ಲಿ ಶಿಕ್ಷಕರು ಮತ್ತು ಪೋಷಕರ ಜವಾಬ್ದಾರಿಯ ಕುರಿತು ಪ್ರಸ್ತಾಪಿಸಿದರು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ, ಸವಾಲುಗಳು ಮತ್ತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಶಾಲೆಯ ಉಪಪ್ರಾಂಶುಪಾಲೆ ಶುಭ ಕೆ ಎನ್, ಪ್ರೌಢಶಾಲಾ ಸಂಯೋಜಕ ಶಿಕ್ಷಕ ಚಂದ್ರಶೇಖರ್ ಶೆಟ್ಟಿ ಉಪಸ್ಥಿತರಿದ್ದರು. ಶಿಕ್ಷಕರಾದ ದಿವ್ಯ ಎಚ್ ಮತ್ತು ಶ್ರೀನಿವಾಸ್ ಬೈಂದೂರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.