ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ನಲ್ಲಿ ಕ್ರಿಸ್ಮಸ್ ಆಚರಣೆ - December 23, 2021

ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ನಲ್ಲಿಕ್ರಿಸ್ಮಸ್ ಆಚರಣೆ

 

           ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿಕೆ ಆರ್ ಆಚಾರ್ಯ ಮೆಮೋರಿಯಲ್ ಹೈಸ್ಕೂಲ್ ನಲ್ಲಿ ಕ್ರಿಸ್ಮಸ್ ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು.ವಿದ್ಯಾರ್ಥಿಗಳು ಮೇರಿ ಮತ್ತು ಸಾಂತಾ ಕ್ಲಾಸ್ ರ ವೇಷ ಧರಿಸಿ, ಸ್ಕಿಟ್ ನ ಮೂಲಕ ಕ್ರಿಸ್ಮಸ್ ಹಬ್ಬದ  ಸಂದೇಶವನ್ನು ಸಾರಿದರು. ವಿದ್ಯಾರ್ಥಿಗಳು ಶಿಕ್ಷಕರೊಂದಿಗೆಮಾಡಿದ ನೃತ್ಯ ಗಮನಸೆಳೆಯಿತು.

ಸಂಸ್ಥೆಯ ಪ್ರಾಂಶುಪಾಲರಾದ ಚಿಂತನಾ ರಾಜೇಶ್ ಉಪ ಪ್ರಾಂಶುಪಾಲರಾದಶುಭಾ ಕೆ ಎನ್, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ಜಗದೀಶ್ ಆಚಾರ್ ಸಾಸ್ತಾನ, ಸಹಾಯಕ ಮುಖ್ಯಶಿಕ್ಷಕಿಕವಿತಾ ಭಟ್ ಉಪಸ್ಥಿತರಿದ್ದರು. ಶಿಕ್ಷಕಿ ದಿವ್ಯ ಪ್ರೀತಿ ನಜ್ರತ್ ರ ಕಾರ್ಯಕ್ರಮ ನಿರೂಪಣೆ ಮತ್ತುಶೈಲಾ ಶಾಲೆಟ್, ವೀರೇಂದ್ರ ನಾಯಕ್ ರ ಸಹಯೋಗದೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು.

45 Years of experience with the best guidance and relevence

Contact Us

© 2021 V K R Acharya Memorial English High School - All Rights Reserved