ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ನಲ್ಲಿ ವಿದ್ಯಾರ್ಥಿ ಸಂಸತ್ತ್ ಗೆ ಚುನಾವಣೆ
ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ ಎಮ್ ಸುಕುಮಾರ ಶೆಟ್ಟಿ ಅಧ್ಯಕ್ಷತೆಯ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ನಲ್ಲಿ ೧೦/೦೬/೨೦೨೨ ಶುಕ್ರವಾರದಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಶಾಲಾ ಸಂಸತ್ತ್ ಗೆ ವಿದ್ಯಾರ್ಥಿ ನಾಯಕರ ಆಯ್ಕೆಗಾಗಿ ಚುನಾವಣೆ ನಡೆಯಿತು. ಚುನಾವಣೆಯ ಪ್ರತಿಯೊಂದು ಮಜಲುಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಸಲುವಾಗಿ ನೈಜ ಚುನಾವಣಾ ಮಾದರಿಯಲ್ಲಿ ಒಂದು ವಾರದ ಮೊದಲೇ ಆರಂಭವಾದ ಈ ಚುನಾವಣಾ ಪ್ರಕ್ರಿಯೆ, ನಾಮಪತ್ರ ಸಲ್ಲಿಕೆ, ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ, ಚುನಾವಣಾ ಪ್ರಚಾರ, ಕೊನೆಯ ಹಂತದ ಅಭ್ರ‍್ಥಿಗಳ ಆಯ್ಕೆ ಹೀಗೆ ಅನೇಕ ಹಂತಗಳನ್ನು ಒಳಗೊಂಡಿತ್ತು. ಬೆರಳಿಗೆ ಶಾಯಿ ಹಾಕಿಸಿಕೊಂಡ ವಿದ್ಯಾರ್ಥಿಗಳು ಬಹಳ ಉತ್ಸಾಹದಿಂದ ತಮ್ಮ ಅಮೂಲ್ಯವಾದ ಮತವನ್ನು ತಮ್ಮ ನೆಚ್ಚಿನ ಅಭ್ರ‍್ಥಿಗೆ ನೀಡುವುದರ ಮೂಲಕ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಿದರು. ಇವಿಎಂ ಮಾದರಿಯ ಟ್ಯಾಬ್ ಮೂಲಕ ವಿದ್ಯಾರ್ಥಿಗಳು ಕಾಗದರಹಿತ ಮತದಾನ ನಡೆಸಿ ನೈಜ ಚುನಾವಣೆಯ ಅನುಭವ ಪಡೆದರು.
ಮಧ್ಯಾಹ್ನದ ವೇಳೆಯಲ್ಲಿ ನಡೆದ ಮೂರು ಸುತ್ತಿನ ಮತ ಎಣಿಕೆಯಲ್ಲಿ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಾಯಕಿಯಾಗಿ ಸನ್ಮಿತಾ, ಸಹಾಯಕವಿದ್ಯಾರ್ಥಿ ನಾಯಕನಾಗಿ ಮಹಮದ್ ಹುಸೈಫ್ ಆಯ್ಕೆಯಾದರೆ, ಪ್ರಾಥಮಿಕ ಶಾಲಾ ವಿದ್ಯಾರ್ಥಿನಾಯಕನಾಗಿ ಸಾತ್ವಿಕ್ ಮತ್ತು ಸಹಾಯಕ ವಿದ್ಯಾರ್ಥಿ ನಾಯಕಿಯಾಗಿ ಶ್ರೀದೇವಿ ಆಯ್ಕೆಯಾದರು. ಸಂಸ್ಥೆಯ ಪ್ರಾಂಶುಪಾಲರಾದ ಚಿಂತನಾ ರಾಜೇಶ್, ಪ್ರೌಢಶಾಲಾ ಮುಖ್ಯಶಿಕ್ಷಕಿ ಶುಭ ಕೆ ಎನ್, ಸಹಾಯಕ ಮುಖ್ಯಶಿಕ್ಷಕ ಚಂದ್ರಶೇಖರ್ ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಜಗದೀಶ್ ಆಚಾರ್ ಸಾಸ್ತಾನ, ಸಹಾಯಕ ಮುಖ್ಯಶಿಕ್ಷಕಿ ಕವಿತಾ ಭಟ್ ರವರ ಮಾರ್ಗದರ್ಶನದಲ್ಲಿ ಇನ್ನಿತರ ಚುನಾವಣಾ ಸಮಿತಿ ಶಿಕ್ಷಕರ ಸಹಯೋಗದೊಂದಿಗೆ ವಿದ್ಯಾರ್ಥಿಚುನಾವಣೆ ಸಂಪನ್ನಗೊಂಡಿತು.