ಎಚ್ ಎಮ್ ಎಮ್ ಮತ್ತು ವಿ ಕೆ ಆರ್ - ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಕಾರ್ಯಾಗಾರ
ಕುಂದಾಪುರ (೧೧/೦೭/೨೦೨೨) : ಬಿ ಎಂ ಸುಕುಮಾರ ಶೆಟ್ಟಿ ಅಧ್ಯಕ್ಷತೆಯ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶಿಕ್ಷಕ ಪುನಃಶ್ಚೇತನ ಕಾರ್ಯಾಗಾರ ಪ್ರೇರಣಾ- ೨೦೨೨ ದ ಮುಂದಿನ ಭಾಗದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ - ಸಂಕ್ಷಿಪ್ತ ಅವಲೋಕನ ಕಾರ್ಯಾಗಾರ ಜರುಗಿತು.
ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿ ಉಡುಪಿಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ಯ ಪ್ರಾಂಶುಪಾಲರಾದ ಶ್ರೀ ಅಶೋಕ್ ಕಾಮತ್ ಆಗಮಿಸಿದ್ದರು. ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಅವರು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಉದ್ದೇಶಗಳು, ಜಾರಿಗೊಳಿಸುವ ವಿಧಾನಗಳು, ಅದನ್ನು ಯಶಸ್ವಿಗೊಳಿಸುವಲ್ಲಿ ಶಿಕ್ಷಕರ ಜವಾಬ್ದಾರಿಗಳ ಬಗ್ಗೆ ಬಹಳ ಅತ್ಯುತ್ತಮವಾದ ಮಾಹಿತಿಯನ್ನು ಹಂಚಿಕೊಂಡರು. ಶಿಕ್ಷಣ ಕ್ಷೇತ್ರಕ್ಕೆ ಕಾಮತ್ ರು ನೀಡಿದ ಅನುಪಮ ಕೊಡುಗೆಗಾಗಿ ಸಂಸ್ಥೆಯು ಅವರನ್ನು ಸನ್ಮಾನಿಸಿತು.
ಕಾರ್ಯಾಗಾರದಲ್ಲಿ ಸಂಸ್ಥೆಯ ಪ್ರಾಂಶುಪಾಲೆ ಚಿಂತನಾ ರಾಜೇಶ್, ಉಪ ಪ್ರಾಂಶುಪಾಲೆ ಮತ್ತು ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶುಭಾ ಕೆ ಎನ್, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ಜಗದೀಶ್ ಆಚಾರ್ ಸಾಸ್ತಾನ, ಸಹಾಯಕ ಮುಖ್ಯ ಶಿಕ್ಷಕಿ ಕವಿತಾ ಭಟ್, ಪರ‍್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಲತಾ ಜಿ ಭಟ್, ಸಂಯೋಜಕ ಶಿಕ್ಷಕಿ ಆರತಿ ಶೆಟ್ಟಿ, ಪ್ರೌಢಶಾಲಾ ಸಹಾಯಕ ಮುಖ್ಯ ಶಿಕ್ಷಕ ಚಂದ್ರಶೇಖರ್ ಶೆಟ್ಟಿ, ಹಾಗೂ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದರು. ಪ್ರೌಢಶಾಲಾ ಶಿಕ್ಷಕ ಪರಮೇಶ್ವರ್ ಉಡುಪ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.