ಕುಂದಾಪುರ ಎಜ್ಯುಕೇಶನ್ ಸೊಸೈಟಿ(ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ೮-೯ನೇ ತರಗತಿ ವಿದ್ಯಾರ್ಥಿಗಳ ಶಿಕ್ಷಕ ರಕ್ಷಕ ಸಭೆ ನಡೆಸಲಾಯಿತು.
ಸಂಸ್ಥೆಯ ಸಂಚಾಲಕರೂ, ಅಧ್ಯಕ್ಷರೂ ಆಗಿರುವ ಬಿ. ಎಮ್. ಸುಕುಮಾರ ಶೆಟ್ಟಿಯವರು ಮಾತನಾಡುತ್ತಾ, ಪೋಷಕರು ತಮ್ಮ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಿ ಅವರ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರೊಂದಿಗೆ ಉತ್ತಮ ಬಾಂಧವ್ಯವನ್ನು ಹೊಂದಿರಬೇಕು. ಅಲ್ಲದೆ ಪ್ರತಿಯೊಂದು ಹಳ್ಳಿಯ ಹೆಣ್ಣು ಮಕ್ಕಳು ಶಿಕ್ಷಿತರಾದರೆ, ಆ ಮನೆಯು ಪರಿಪೂರ್ಣ ಸಂಸ್ಕಾರಯುಕ್ತ ಮನೆಯಾಗಿ ಸಮಾಜದ ಬದಲಾವಣೆ ಸಾಧ್ಯ ಎಂದು ಹೇಳಿದರು.
ಪೋಷಕರು ತಮ್ಮ ಮಕ್ಕಳನ್ನು ಬೇರೆಯವರಿಗೆ ಹೋಲಿಸದೆ ಮಕ್ಕಳ ರಚನಾತ್ಮಕ ಬೆಳವಣಿಗೆಗೆ ಪ್ರೇರಣೆ ನೀಡಬೇಕು ಎಂದು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಹೇಳಿದರು.
ಸಂಸ್ಥೆಯ ಉಪಪ್ರಾಂಶುಪಾಲರು ಮತ್ತು ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಶುಭಾ ಕೆ. ಎನ್. ವಾರ್ಷಿಕ ಕಾರ್ಯ ಚಟುವಟಿಕೆಗಳ ವರದಿಯನ್ನು ಮಂಡಿಸಿದರು. ಪ್ರೌಢ ಶಾಲಾ ವಿಭಾಗದ ಸಹಾಯಕ ಮುಖ್ಯ ಶಿಕ್ಷಕ ಚಂದ್ರಶೇಖರ ಶೆಟ್ಟಿ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ಜಗದೀಶ್ ಆಚಾರ್ ಉಪಸ್ಥಿತರಿದ್ದರು. ಶಿಕ್ಷಕಿ ದಿವ್ಯಾ ಎಚ್. ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಸುರೇಂದ್ರ ಶೆಟ್ಟಿ ಜಿ. ವಂದಿಸಿದರು.