ಕುಂದಾಪುರ (11.08.2023): ಐಕ್ಯತೆಯ ಮನೋಭಾವ ಮತ್ತು ದೇಶಪ್ರೇಮವನ್ನು ಪ್ರತಿಯೋರ್ವ ವಿದ್ಯಾರ್ಥಿಯು ಜೀವನದಲ್ಲಿ ಬೆಳೆಸಿಕೊಳ್ಳಬೇಕು. ದೇಶ ಸೇವೆಯೇ ಈಶ ಸೇವೆ ಎನ್ನುವಂತೆ ಭಾರತ ಮಾತೆಯ ರಕ್ಷಣೆ ನಮ್ಮೆಲ್ಲರ ಹೊಣೆ ಎಂದು ಮಾಜಿ ಸೈನಿಕರಾದ ಬಸ್ರೂರಿನ ಗಣಪತಿ ಖಾರ್ವಿ ಹೇಳಿದರು.
ಅವರು ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ) ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಆಯೋಜಿಸಿದ “ಯೋಧರೊಂದಿಗೆ ಒಂದು ದಿನ” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ, ಸೇನೆಯ ಮತ್ತು ಕಾರ್ಗಿಲ್ ಯುದ್ಧದ ತಮ್ಮ ಅನುಭವಗಳನ್ನು ಹಂಚಿಕೊಂಡರು.
ಪ್ರಾಂಶುಪಾಲೆ ಡಾ| ಚಿಂತನಾ ರಾಜೇಶ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಸಂಯೋಜಕಿ ವಿಲ್ಮಾ ಡಿ ಸಿಲ್ವಾ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿ.ಕೆ.ಆರ್ ಪ್ರೌಢಶಾಲೆಯ ವಿದ್ಯಾರ್ಥಿ ಮುಖಂಡ, ಎನ್. ಸಿ. ಸಿ ಸಾರ್ಜೆಂಟ್ ಜಯಸೂರ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.