ಅಜ್ಜ-ಅಜ್ಜಿಯಂದಿರ ದಿನ - March 2, 2020

ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಶಾಲೆಯ ಪೂರ್ವ ಪ್ರಾಥಮಿಕ ವಿಭಾಗದಲ್ಲಿ ಅಜ್ಜ-ಅಜ್ಜಿಯಂದಿರ ದಿನವನ್ನು ವಿಶೇಷವಾಗಿ ಆಚರಿಸಲಾಯಿತು.

ಮೊಮ್ಮಕ್ಕಳ ಜೀವನದಲ್ಲಿ ಪ್ರಮುಖವಾದ ಪಾತ್ರವನ್ನು ವಹಿಸುವ ಅಜ್ಜ-ಅಜ್ಜಿಯಂದಿರನ್ನು ಮಕ್ಕಳು ಗೌರವಿಸಿದರು. ಶಾಲೆಯಲ್ಲಿ ಅಜ್ಜ-ಅಜ್ಜಿಯಂದಿರಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿದ ಹಿರಿಯರು ಮಕ್ಕಳೊಂದಿಗೆ ಹೆಜ್ಜೆ ಹಾಕಿ ನಲಿದು, ಸಂಭ್ರಮಿಸಿ ಹರಸಿದರು.

ಪೂರ್ವಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಲತಾ.ಜಿ.ಭಟ್ ಸ್ವಾಗತಿಸಿ, ವಿಜೇತರಿಗೆ ಬಹುಮಾನಗಳನ್ನು ವಿತರಿಸಿದರು. ಶಿಕ್ಷಕಿ ಜ್ಯೋತಿ ಉಪಸ್ಥಿತರಿದ್ದರು.

45 Years of experience with the best guidance and relevence

Contact Us

© 2021 V K R Acharya Memorial English High School - All Rights Reserved