ಕರಾಟೆಯಲ್ಲಿ ಬಹುಮಾನ - December 15, 2023

ಕುಂದಾಪುರ (ಡಿ. 15) : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಗುರು ಗೊಜು ರೂ ಕರಾಟೆ ಡೊ ಅಕಾಡೆಮಿ ಇಂಡಿಯಾ (ರಿ) ವತಿಯಿಂದ ಮಂಗಳೂರಿನಲ್ಲಿ ನಡೆದ ಫಸ್ಟ್ ನ್ಯಾಶನಲ್ ಲೆವೆಲ್ ಕರಾಟೆ ಚಾಂಪಿಯನ್ ಶಿಪ್ 2023ರಲ್ಲಿ ಭಾಗವಹಿಸಿ ವಿಜೇತರಾಗಿರುತ್ತಾರೆ. ವಿದ್ಯಾರ್ಥಿಗಳಾದ ಆರ್ಯನ್ ಕೆ ಪೂಜಾರಿ ಕಟಾ ಮತ್ತು ಕುಮಿಟೆಯಲ್ಲಿ ಪ್ರಥಮ ಸ್ಥಾನವನ್ನು, ಭುವನ್ ಕಟಾ ಮತ್ತು ಕುಮಿಟೆಯಲ್ಲಿ ದ್ವಿತೀಯ ಸ್ಥಾನವನ್ನು, ಅರ್ನೋನ್ ಡಿ ಅಲ್ಮೆಡಾ ಕಟಾದಲ್ಲಿ ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ. ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಅಭಿನಂದಿಸಿದರು.

45 Years of experience with the best guidance and relevence

Contact Us

© 2021 V K R Acharya Memorial English High School - All Rights Reserved