ಎಚ್.ಎಮ್. ಎಮ್, ವಿ. ಕೆ. ಆರ್ ನ ಶಿಕ್ಷಕ ರಮೇಶ್ ಹಾಂಡ ರಾಜ್ಯ ಮಟ್ಟಕ್ಕೆ - December 7, 2023

ಕುಂದಾಪುರ ( ಡಿ. 7) : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಮತ್ತು ವಿ. ಕೆ. ಆರ್ ಆಂಗ್ಲ ಮಾಧ್ಯಮ ಶಾಲೆಗಳ ಚಿತ್ರಕಲಾ ಶಿಕ್ಷಕ ರಮೇಶ್ ಹಾಂಡರವರು, 2023-24ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗಾಗಿ, ಉಪನಿರ್ದೇಶಕರ ಕಛೇರಿ ಸಾರ್ವಜನಿಕ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ವತಿಯಿಂದ ಆಯೋಜಿಸಲ್ಪಟ್ಟ ಜಿಲ್ಲಾ ಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳಲ್ಲಿ ಭಾಗವಹಿಸಿ, ಡ್ರಾಯಿಂಗ್ ನಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವುದು ಸಂಸ್ಥೆಗೆ ಹೆಮ್ಮೆಯ ವಿಷಯವಾಗಿದೆ. ರಾಜ್ಯಮಟ್ಟಕ್ಕೆ ಆಯ್ಕೆಯಾದ ಶಿಕ್ಷಕ ರಮೇಶ್ ಹಾಂಡರವರನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು  ಅಭಿನಂದಿಸಿದರು.

45 Years of experience with the best guidance and relevence

Contact Us

© 2021 V K R Acharya Memorial English High School - All Rights Reserved