ಎಚ್.ಎಮ್.ಎಮ್ : ಸಾಧಕರಿಗೆ ಸಮ್ಮಾನ - March 9, 2021

ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭರತನಾಟ್ಯ ಹಾಗೂ ನಟನೆಯಲ್ಲಿ ಗುರುತಿಸಿಕೊಂಡ ಇಬ್ಬರು ವಿದ್ಯಾರ್ಥಿನಿಯರನ್ನು ವಿಶ್ವ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಸಮ್ಮಾನಿಸಲಾಯಿತು.

ಅಖಿಲ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಒಲಿಸಿಕೊಂಡ ಭರತನಾಟ್ಯ ಕಲಾವಿದೆ ಶ್ರೇಯಾ ಆಚಾರ್ಯ ಹಾಗೂ ಗುಲ್ವಾಡಿ ಟಾಕೀಸ್ ಬ್ಯಾನರ್ ಅಡಿಯನ್ನು ನಿರ್ಮಾಣಗೊಳ್ಳುತ್ತಿರುವ ಕನ್ನಡ ಚಲನಚಿತ್ರ ‘ಆ ತೊಂಬತ್ತು ದಿನಗಳು’ ಇದರಲ್ಲಿ ನಟಿಸಿದ ಬಾಲಕಲಾವಿದೆ ಪ್ರಾಪ್ತಿ ಮಡಪ್ಪಾಡಿ ಸನ್ಮಾನಿತರಾದ ವಿದ್ಯಾರ್ಥಿನಿಯರು.

ಸಂಸ್ಥೆಯ ಉಪಪ್ರಾಂಶುಪಾಲರಾದ ಶುಭಾ ಕೆ.ಎನ್, ಮುಖ್ಯಶಿಕ್ಷಕರಾದ ಜಗದೀಶ್ ಆಚಾರ್ ಸಾಸ್ತಾನ, ಸಹಾಯಕ ಮುಖ್ಯಶಿಕ್ಷಕಿ ಕವಿತಾ ಭಟ್ ಉಪಸ್ಥಿತರಿದ್ದರು. ಶಿಕ್ಷಕ ಪ್ರಕಾಶ್ ಬಿಲ್ಲವ ಕಾರ್ಯಕ್ರಮ ನಿರೂಪಿಸಿದರು.

45 Years of experience with the best guidance and relevence

Contact Us

© 2021 V K R Acharya Memorial English High School - All Rights Reserved