ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಶಾಲೆಯಲ್ಲಿ ಸೋಮವಾರ(15.03.2021)ದಂದು ‘ಹದಿಹರೆಯದ ಜಾಗೃತಿ ಕಾರ್ಯಾಗಾರ ’ ನೆರವೇರಿತು.
ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಅಶ್ವಿನಿ ಕ್ಲಿನಿಕ್‌ನ ವೈದ್ಯರಾದ ಡಾ. ರವೀಂದ್ರ ತಲ್ಲೂರು ಇವರು ಹದಿಹರೆಯದ ದೈಹಿಕ ಹಾಗೂ ಮಾನಸಿಕ ಬದಲಾವಣೆಯ ಕುರಿತಾದ ಮಾಹಿತಿಯನ್ನು ಬಾಲಕರಿಗೆ ನೀಡಿದರು.
ಪ್ರಾಂಶುಪಾಲರಾದ ಚಿಂತನಾ ರಾಜೇಶ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪಪ್ರಾಂಶುಪಾಲರಾದ ಶುಭಾ ಕೆ.ಎನ್, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯಶಿಕ್ಷಕರಾದ ಜಗದೀಶ್ ಆಚಾರ್ ಸಾಸ್ತಾನ, ಶಿಕ್ಷಕ ಚಂದ್ರಶೇಖರ್ ಶೆಟ್ಟಿ ಉಪಸ್ಥಿತರಿದ್ದರು. ಸಹಾಯಕ ಮುಖ್ಯಶಿಕ್ಷಕಿ ಕವಿತಾ ಭಟ್ ಕಾರ್ಯಕ್ರಮ ಸಂಯೋಜಿಸಿದ್ದರು. ಶಿಕ್ಷಕ ರವಿಚಂದ್ರ ಕಾರ್ಯಕ್ರಮ ನಿರೂಪಿಸಿದರು.