School news

‘ಪ್ರೇರಣಾ – ೨೦೨೨’ ಸರಣಿ ಕಾರ‍್ಯಾಗಾರದ ಉದ್ಘಾಟನೆ

‘ಪ್ರೇರಣಾ – ೨೦೨೨’ ಸರಣಿ ಕಾರ‍್ಯಾಗಾರದ ಉದ್ಘಾಟನೆ

‘ಪ್ರೇರಣಾ – ೨೦೨೨’ ಸರಣಿ ಕಾರ‍್ಯಾಗಾರದ ಉದ್ಘಾಟನೆ

ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ವಿ.ಕೆ.ಆರ್ ಆಚಾರ್ಯ ಸ್ಮಾರಕ ಪ್ರೌಢ ಶಾಲೆಗಳ ಶಿಕ್ಷಕರಿಗಾಗಿ ಸಂಯೋಜಿಸಿದ ‘ಪ್ರೇರಣಾ – ೨೦೨೨’ ಸರಣಿ ಕರ‍್ಯಾಗಾರದ ಉದ್ಘಾಟನಾ ಸಮಾರಂಭ ಶಾಲೆಯಲ್ಲಿ ಇತ್ತೀಚೆಗೆ ಜರಗಿತು.

ಶಿಕ್ಷಣ ಕ್ಷೇತ್ರದಲ್ಲಿನ ಹೊಸತನಗಳನ್ನು ಅಳವಡಿಸಿಕೊಳ್ಳುವುವುದು, ರಾಷ್ಟಿಯ ಶಿಕ್ಷಣ ನೀತಿ, ನೂತನ ತಂತ್ರಜ್ಞಾನ, ಮನೋವಿಜ್ಞಾನ ಹೀಗೆ ಹಲವಾರು ವಿಚಾರಗಳನ್ನು ಒಳಗೊಂಡಿರುವ ಸರಣಿ ಕರ‍್ಯಾಗಾರ ‘ಪ್ರೇರಣಾ-೨೦೨೨’ ರ ಕರ‍್ಯಾಗಾರವನ್ನು ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಕೆ. ಉಮೇಶ್ ಶೆಟ್ಟಿ ಉದ್ಘಾಟಿಸಿದರು. 

 ಪೂರ್ವ ಪ್ರಾಥಮಿಕ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಎಲ್ಲಾ ಶಿಕ್ಷಕರು ಭಾಗವಹಿಸಿದ ಈ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಚಿಂತನಾ ರಾಜೇಶ್ ವಹಿಸಿದ್ದರು. ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಲತಾ ಜಿ ಭಟ್, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಜಗದೀಶ್ ಆಚಾರ್ ಸಾಸ್ತಾನ, ಪ್ರೌಢ ಶಾಲೆಯ ಸಹಾಯಕ ಮುಖ್ಯ ಶಿಕ್ಷಕ ಚಂದ್ರಶೇಖರ್ ಶೆಟ್ಟಿ ಸಭೆಯಲ್ಲಿ ಉಪಸ್ಥಿತರಿದ್ದರು. 

 ಸಂಸ್ಥೆಯ ಉಪಪ್ರಾಂಶುಪಾಲರಾದ ಶುಭಾ ಕೆ. ಎನ್ ಹಾಗೂ ಪ್ರಾಥಮಿಕ ವಿಭಾಗದ ಸಹಾಯಕ ಮುಖ್ಯ ಶಿಕ್ಷಕಿ ಕವಿತಾ ಭಟ್ ಕಾರ್ಯಕ್ರಮ ನಿರೂಪಿಸಿದರು.