School news

ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

ಎಚ್ ಎಮ್ ಎಮ್ ಮತ್ತು ವಿ ಕೆ ಆರ್ ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

ಕುಂದಾಪುರ (18.07.2023): ಬಿ ಎಂ ಸುಕುಮಾರ ಶೆಟ್ಟಿ ಯವರ ಅಧ್ಯಕ್ಷತೆಯ ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್  ಪ್ರಾಥಮಿಕ ಮತ್ತು ವಿ ಕೆ ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ  ವಿಶ್ವ ಕುಂದಾಪ್ರ ಕನ್ನಡ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ  ಗಣೇಶ್ ಶೆಟ್ಟಿ, ಶಿಕ್ಷಕರು, ಕರ್ನಾಟಕ ಪಬ್ಲಿಕ್ ಸ್ಕೂಲ್, ನೆಂಪು ಇವರು  ಕುಂದಾಪ್ರ ಭಾಷೆಯ ವೈವಿಧ್ಯತೆ ಮತ್ತು ಸಾಂಸ್ಕೃತಿಕ ಮಹತ್ವದ ಕುರಿತು ಮಾತನಾಡಿದರು. 

 ಶಾಲೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು   ಉಪಪ್ರಾಂಶುಪಾಲೆ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕಿ ಶುಭಾ ಕೆ ಎನ್ ವಹಿಸಿದ್ದರು.  ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಾದ ಜಗದೀಶ್ ಆಚಾರ್ ಸಾಸ್ತಾನ ,  ಪ್ರೌಢಶಾಲಾ ಸಹಾಯಕ ಮುಖ್ಯ ಶಿಕ್ಷಕ ಶ್ರೀ ಚಂದ್ರಶೇಖರ್ ಶೆಟ್ಟಿ, ಪೂರ್ವ ಪ್ರಾಥಮಿಕ ವಿಭಾಗದ  ಮುಖ್ಯ ಶಿಕ್ಷಕಿ ಲತಾ ಜಿ ಭಟ್ ಉಪಸ್ಥಿತರಿದ್ದರು. ಶಿಕ್ಷಕಿ ವಿದ್ಯಾ ಕಾರ್ಯಕ್ರಮವನ್ನು ನಿರೂಪಿಸಿದರು. ಪ್ರಾಥಮಿಕ ವಿಭಾಗದ ಸಹಾಯಕ ಮುಖ್ಯ ಶಿಕ್ಷಕಿ ಕವಿತಾ ಭಟ್ ಕಾರ್ಯಕ್ರಮವನ್ನು ಸಂಯೋಜಿಸಿದರು.