School news

ಎಚ್.ಎಮ್. ಎಮ್.ವಿ.ಕೆ.ಆರ್ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ

ಎಚ್.ಎಮ್. ಎಮ್.ವಿ.ಕೆ.ಆರ್ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ

ಕುಂದಾಪುರ (ನ.1) : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ.ಕೆ.ಆರ್ ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳಲ್ಲಿ ಇಂದು ಬಹಳ ಅರ್ಥಪೂರ್ಣವಾಗಿ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಲಾಯಿತು.

 ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಮತ್ತು ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರು ತಾಯಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು, ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. 

ಶಿಕ್ಷಕ ಸಂಜಿತ್ ಹೆಗ್ಡೆ ದಿನದ ಮಹತ್ವವನ್ನು ಅರುಹಿದರು. ಶಿಕ್ಷಕ ರವಿಚಂದ್ರರವರ ಕನ್ನಡ ಹಿರಿಮೆಯನ್ನು ಬಿತ್ತರಿಸುವ ಗೀತ ಗಾಯನ ಕಾರ್ಯಕ್ರಮದ ಮೆರುಗನ್ನು ಇಮ್ಮಡಿಗೊಳಿಸಿತು. ಪ್ರೌಢಶಾಲಾ ಶಿಕ್ಷಕಿ ಸುಜಾತ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.